
ಸುರಪುರ ತಾಲ್ಲೂಕಿನಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಣಿಕೆ ಮಾಡುವವರ ವಿರುದ್ಧ ಪ್ರಕರಣ ದಾಖಲು
=======================
ಯಾದಗಿರಿ, ಸೆಪ್ಟೆಂಬರ್. 30 || ಸುರಪುರ ತಾಲೂಕಿನಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಾಣಿಕೆ ಮಾಡುತ್ತಿದ್ದವರ ವಿರುದ್ಧ ಆಹಾರ ಇಲಾಖೆ ಹಾಗೂ ಪೆÇಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದೆ.
ಸುರಪುರ ತಾಲೂಕಿನ ಕಕ್ಕೇರಿ ಕಡೆಯಿಂದ ಸುರಪುರ ಬೈಪಾಸ್ ಮುಖಾಂತರ ಕಲಬುರಗಿ ಕಡೆಗೆ ಐಷರ್ ಗೂಡ್ಸ್ ವಾಹನದಲ್ಲಿ (ಸಂಖ್ಯೆ: ಕೆಎ 32 ಎಎ 0563) ಅನಧಿಕೃತವಾಗಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಲಭಿಸಿತ್ತು. ಈ ಮಾಹಿತಿಯ ಮೇರೆಗೆ ಸುರಪುರ ಆಹಾರ ನಿರೀಕ್ಷಕರು ಹಾಗೂ ಪೆÇಲೀಸ್ ಇಲಾಖೆ ಸಿಬ್ಬಂದಿಗಳು ಜಂಟಿಯಾಗಿ ದಾಳಿ ನಡೆಸಿ ವಾಹನವನ್ನು ಪರಿಶೀಲಿಸಿದ್ದಾರೆ.
ದಾಳಿಯ ವೇಳೆ ವಾಹನದಲ್ಲಿದ್ದ 165.00 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ಜಪ್ತಿ ಮಾಡಲಾದ ಅಕ್ಕಿಯ ಅಂದಾಜು ಮೌಲ್ಯ ರೂ. 3,82,800 ಹಾಗೂ ಐಷರ್ ಗೂಡ್ಸ್ ವಾಹನದ ಅಂದಾಜು ಮೌಲ್ಯ ರೂ. 4,00,000 ಆಗಿದೆ.
ಈ ಸಂಬಂಧ ದಿನಾಂಕ 28/09/2026 ರಂದು ಸುರಪುರ ಪೆÇಲೀಸ್ ಠಾಣೆಯಲ್ಲಿ ವಾಹನ ಚಾಲಕನ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955 ರ ಕಲಂ 3 ಮತ್ತು 7 ರಡಿ ಪ್ರಕರಣ (ಪ್ರಕರಣ ಸಂಖ್ಯೆ: 242/2026) ದಾಖಲಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ಯಾದಗಿರಿಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Yadgir, Yadgir | Sep 30, 2026