ಕೊಟ್ಟೂರು: ಕೊಟ್ಟೂರಿನಲ್ಲಿ ಸಿದ್ದರಾಮಯ್ಯನವರ ಪ್ರತಿಮೆ ತೆರವು ವಿರೋಧಿಸಿ ಪ್ರತಿಭಟನೆ
ಕಲಬುರ್ಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರತಿಮೆ ತೆರವುಗೊಳಿಸಿರುವುದನ್ನು ವಿರೋಧಿಸಿ, ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ತಹಸಿಲ್ದಾರ್ ಕಚೇರಿಯವರೆಗೆ ಪ್ರತಿಭಟನಾ ರ್ಯಾಲಿ ನಡೆಸಲಾಯಿತು. ಸರ್ಕಾರ ಮತ್ತು ಜಿಲ್ಲಾಡಳಿತದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.