ಬೆಳಗಾವಿ: ಬೆಳಗಾವಿ ಪಾಲಿಕೆಯಲ್ಲಿ ಐತಿಹಾಸಿಕ ಕನ್ನಡ ಪರ ನಿರ್ಣಯ: ಚನ್ನಮ್ಮ ವೃತ್ತದಲ್ಲಿ ವಿಜಯೋತ್ಸವ
ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ 'ಬೆಳಗಾವಿ ನಮ್ಮದು' ಎಂಬ ಐತಿಹಾಸಿಕ ಕನ್ನಡ ಪರ ನಿರ್ಣಯ ಅಂಗೀಕಾರವಾಗಿದೆ. ಅಶೋಕ ಚಂದರಗಿ ನೇತೃತ್ವದಲ್ಲಿ ಚನ್ನಮ್ಮ ವೃತ್ತದಲ್ಲಿ ಹೋರಾಟಗಾರರು ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು. ಆರು ತಿಂಗಳ ಹೋರಾಟಕ್ಕೆ ಇಂದು ಜಯ ಸಿಕ್ಕಿದೆ.