ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ UNICEF ತಂಡದೊಂದಿಗೆ ಮಹತ್ವದ ಸಭೆ
ಯಾದಗಿರಿ: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ರಾಹುಲ್ ತುಕಾರಾಮ ಪಾಂಡ್ವೆ, ಭಾ.ಆ.ಸೇ. ಅವರ ಅಧ್ಯಕ್ಷತೆಯಲ್ಲಿ UNICEF ಹೈದರಾಬಾದ್ ತಂಡದೊಂದಿಗೆ ಮಹತ್ವದ ಸಭೆ ನಡೆಯಿತು.
ಸಭೆಯಲ್ಲಿ ಸ್ವಚ್ಛತೆ, ಕುಡಿಯುವ ನೀರು ಹಾಗೂ WASH (Water, Sanitation and Hygiene) ಸೇರಿದಂತೆ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ಶ್ರೀ ಕೆ. ಕುಮಲಯ್ಯ, UNICEF ತಂಡದ Dr. Prabhat Matpady, WASH & CCES Expert ಹಾಗೂ NL Narasimha Reddy, E&K Management Expert ಸೇರಿದಂತೆ DDPI, DHO, WCD, DIET ಪ್ರಾಂಶುಪಾಲರು ಹಾಗೂ SBM ತಂಡದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಸಭೆಯಲ್ಲಿ Swachh Bharat Mission (SBM) ಮತ್ತು Jal Jeevan Mission (JJM) ಯೋಜನೆಗಳ ಅನುಷ್ಠಾನ, ಸ್ವಚ್ಛತೆ, ಕುಡಿಯುವ ನೀರಿನ ಲಭ್ಯತೆ ಹಾಗೂ ಸಂಬಂಧಿತ ಕಾರ್ಯಕ್ರಮಗಳ ಪ್ರಗತಿ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಯಿತು.
ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ ಮತ್ತು ಸುರಕ್ಷಿತ ಕುಡಿಯುವ ನೀರಿನ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಇಲಾಖೆಗಳ ನಡುವೆ ಸಮನ್ವಯದಿಂದ ಕಾರ್ಯನಿರ್ವಹಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
#YadgirNews #Yadgir #UNICEF #WASH #UnicefTeamHyderabad #SBM #SBMG #JJM #JalJeevanMission #SwachhBharatMission #DistrictAdministrationYadgir #RuralDevelopment #PanchayatRajKarnataka
Yadgir, Yadgir | Sep 30, 2026