ರಾಮನಗರ: ವಿಶೇಷಚೇತನರ ಧರಣಿಗೆ ಬೆಂಬಲ ಸೂಚಿಸಿದ ಸಂಸದ ಡಾ. ಸಿ.ಎನ್. ಮಂಜುನಾಥ್
ರಾಮನಗರದಲ್ಲಿ ನಡೆಯುತ್ತಿರುವ ವಿಶೇಷಚೇತನರ ಅನಿರ್ದಿಷ್ಟಾವಧಿ ಧರಣಿಗೆ ಸಂಸದ ಡಾ. ಸಿ.ಎನ್. ಮಂಜುನಾಥ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಮಾಶಾಸನ ಬಿಡುಗಡೆ ಹಾಗೂ ವಿವಿಧ ಬೇಡಿಕೆಗಳ ಕುರಿತು ಸಿಎಂ ಅಪರ ಮುಖ್ಯ ಕಾರ್ಯದರ್ಶಿಯೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಸಂಸದರು, ಧರಣಿ ಸ್ಥಳಕ್ಕೆ ಭೇಟಿ ನೀಡುವುದಾಗಿ ಭರವಸೆ ನೀಡಿದ್ದಾರೆ.