ಬೆಳಗಾವಿ: ಬೆಳಗಾವಿ ಪಾಲಿಕೆ: ಮಹಿಳಾ ಅಧಿಕಾರಿಗೆ ಅವಮಾನ ಆರೋಪ, ಸದಸ್ಯ ಶಾಹಿದ್ ಖಾನ್ ವಿರುದ್ಧ ಸಿಬ್ಬಂದಿ ಪ್ರತಿಭಟನೆ
ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಮಹಿಳಾ ಅಧಿಕಾರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪಾಲಿಕೆ ಸದಸ್ಯ ಶಾಹಿದ್ ಖಾನ್ ಪಠಾಣ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಕಚೇರಿ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ನಡೆಯುತ್ತಿದೆ.