Install App
Login
HOME
Delhi
Haryana
Uttar Pradesh
Bihar
Chhattisgarh
Madhya Pradesh
Rajasthan
Jharkhand
Himachal Pradesh
Uttarakhand
Punjab
Andhra Pradesh
Telangana
Tamil Nadu
Karnataka
Maharashtra
Assam
West Bengal
Tripura
Gujarat
Odisha
Kerala
Jansamasya
News
पुलिस
Maharashtra
Bjp
National
Police
Bihar
India
Accident
Congress
Modi
Delhi
Viral
Up
अमित_शाह
Bollywood
दिल्ली
Patna
Breakingnews
Narendramodi
Nitishkumar
Madhya_pradesh
Madhyapradesh
Pmmodi
Rahulgandhi
Uttarpradesh
Haryana
Cricket
Lucknow
mdrafiq790
ಯಾದಗಿರಿ || ಅಧಿಕಾರಿಗಳಿಗೆ ಜವಾಬ್ದಾರಿ ಇಲ್ಲವೇ? ನಿಮ್ಮ ಕೆಲಸವನ್ನೂ ನಾವು ಹೇಳಬೇಕೇ? “ಇದು ನಿಮ್ಮ ಕೆಲಸ” ಎಂದು ಅಧಿಕಾರಿಗಳಿಗೆ ನೆನಪಿಸಬೇಕಾದ ಪರಿಸ್ಥಿತಿ ಯಾದಗಿರಿಯಲ್ಲಿ
Yadgir, Yadgir
| Sep 29, 2026
MORE NEWS
*ಜಲ್ಲಿಯೂ ಇಲ್ಲ ಇಂಜಿನಿಯರ್ ಕೂಡ ಇಲ್ಲ ನಂದಿಗುಂದದಲ್ಲಿ ಕಳಪೆ ರಸ್ತೆ ಕಾಮಗಾರಿ ತಡೆದ ಕರವೇ ಸ್ವಾಭಿಮಾನಿ ಸೇನೆ ಮತ್ತು ನಂದಿಗುಂದ ಗ್ರಾಮಸ್ಥರು ಲೋಕಾಯುಕ್ತಕ್ಕೆ ದೂರು ನೀಡಲು ನಿರ್ಧಾರ* ---------- ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ನಂದಿಗುಂದ ಗ್ರಾಮದಲ್ಲಿ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (KRIDL) ಇಲಾಖೆಯ ವತಿಯಿಂದ ಕೈಗೊಳ್ಳಲಾಗಿದ್ದ ಕಾಂಕ್ರೀಟ್ ರಸ್ತೆ ಕಾಮಗಾರಿಯಲ್ಲಿ ವ್ಯಾಪಕ ಭ್ರಷ್ಟಾಚಾರ ಮತ್ತು ಕಳಪೆ ಗುಣಮಟ್ಟ ಎದ್ದು ಕಂಡ ಹಿನ್ನೆಲೆಯಲ್ಲಿ, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಮತ್ತು ಗ್ರಾಮಸ್ಥರು ಜಂಟಿಯಾಗಿ ಪ್ರತಿಭಟಿಸಿ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಿದ ಘಟನೆ ನಡೆದಿದೆ. ನಂದಿಗುಂದ ಗ್ರಾಮದಲ್ಲಿ ನಿಯಮಾವಳಿಗಳನ್ನು ಗಾಳಿಗೆ ತೂರಿ ಸಂಜೆ 6 ಗಂಟೆಯ ನಂತರ ರಸ್ತೆ ಕಾಂಕ್ರೀಟೀಕರಣ ಕೆಲಸವನ್ನು ಆರಂಭಿಸಲಾಗಿತ್ತು. ಸ್ಥಳದಲ್ಲಿ ಯಾವುದೇ ಜವಾಬ್ದಾರಿಯುತ KRIDL ಅಧಿಕಾರಿಗಳಾಗಲಿ, ಇಂಜಿನಿಯರ್ ಆಗಲಿ ಅಥವಾ ಗುತ್ತಿಗೆದಾರರಾಗಲಿ ಇರಲಿಲ್ಲ. ಇನ್ನು ಆತಂಕಕಾರಿ ವಿಷಯವೆಂದರೆ, ಇಂಜಿನಿಯರ್ ಫೋನ್ ಮೂಲಕ ಸಂಪರ್ಕಿಸಿದಾಗ ತಮಗೆ ಇಂತಹದ್ದೊಂದು ರಸ್ತೆ ಕಾಮಗಾರಿ ನಡೆಯುತ್ತಿರುವುದೇ ಗೊತ್ತಿಲ್ಲ ಎಂದು ಬೇಜವಾಬ್ದಾರಿಯ ಉತ್ತರ ನೀಡಿದ್ದಾರೆ. ಅಧಿಕಾರಿಗಳ ಸಮ್ಮತಿಯಿಲ್ಲದೆ ರಾತ್ರೋರಾತ್ರಿ ರಹಸ್ಯವಾಗಿ ಈ ಕಾಮಗಾರಿ ನಡೆಸುತ್ತಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡುವಾಗ ಸಿಮೆಂಟ್ನಲ್ಲಿರುವ ತೇವಾಂಶ ಮತ್ತು ಗಟ್ಟಿ ದ್ರಾವಣವನ್ನು ಮಣ್ಣು ಹೀರಿಕೊಳ್ಳಬಾರದು ಎಂಬ ತಾಂತ್ರಿಕ ಕಾರಣಕ್ಕಾಗಿ ತಳಭಾಗದಲ್ಲಿ ಕಡ್ಡಾಯವಾಗಿ ಪ್ಲಾಸ್ಟಿಕ್ ಶೀಟ್ ಅಳವಡಿಸಬೇಕು. ಜೊತೆಗೆ ರೋಲರ್ ಮೂಲಕ ಜಲ್ಲಿ ಕಲ್ಲುಗಳನ್ನು ಹಾಸಿ ತಳಪಾಯ ಗಟ್ಟಿಗೊಳಿಸಬೇಕು. ಆದರೆ ಇಲ್ಲಿ ಯಾವುದೇ ನಿಯಮ ಪಾಲಿಸದೆ, ಕನಿಷ್ಠ ಪ್ಲಾಸ್ಟಿಕ್ ಶೀಟ್ ಕೂಡ ಹಾಕದೆ ಬರಿ ಮಣ್ಣಿನ ಮೇಲೆಯೇ ನೇರವಾಗಿ ಕಾಂಕ್ರೀಟ್ ಮಿಶ್ರಣವನ್ನು ಸುರಿಯಲಾಗುತ್ತಿತ್ತು. ಇಂತಹ ಕಳಪೆ ತಂತ್ರಜ್ಞಾನದಿಂದಾಗಿ ರಸ್ತೆ ಕೆಲವೇ ದಿನಗಳಲ್ಲಿ ಬಿರುಕು ಬಿಟ್ಟು ಹಾಳಾಗುವುದು ಸ್ಪಷ್ಟವಾಗಿದ್ದು, ಸಾರ್ವಜನಿಕರ ತೆರಿಗೆ ಹಣದಲ್ಲಿ ಇಂತಹ ಕಳಪೆ ಕಾಮಗಾರಿ ಮಾಡುವುದು ಎಷ್ಟು ಸರಿ?" ಎಂದು ಸಾರ್ವಜನಿಕರು ತೀವ್ರವಾಗಿ ಪ್ರಶ್ನಿಸಿದ್ದಾರೆ. ರಾತ್ರಿ ವೇಳೆ ನಡೆಯುತ್ತಿದ್ದ ಈ ಕಳಪೆ ಕಾಮಗಾರಿಯ ಕುರಿತು ಮಾಹಿತಿ ಪಡೆದ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಕೊಡಗು ಜಿಲ್ಲಾಧ್ಯಕ್ಷರಾದ ಫ್ರಾನ್ಸಿಸ್ ಡಿಸೋಜ ಹಾಗೂ ನಂದಿಗುಂದ ಗ್ರಾಮಸ್ಥರು ತಕ್ಷಣ ಸ್ಥಳಕ್ಕೆ ಧಾವಿಸಿ ಕಾಮಗಾರಿಯನ್ನು ತರಾಟೆಗೆ ತೆಗೆದುಕೊಂಡರು. "ಯಾರ ಅನುಮತಿಯೊಂದಿಗೆ, ಯಾವ ಇಂಜಿನಿಯರ್ ಉಸ್ತುವಾರಿಯಲ್ಲಿ ಈ ಕಳಪೆ ರಸ್ತೆ ಮಾಡಲಾಗುತ್ತಿದೆ?" ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಸ್ಥಳದಲ್ಲೇ ಕಾಮಗಾರಿಯನ್ನು ಅರ್ಧಕ್ಕೆ ತಡೆದು ನಿಲ್ಲಿಸಿದರು. "ಈಗಾಗಲೇ ಮಣ್ಣಿನ ಮೇಲೆ ನಿಯಮಬಾಹಿರವಾಗಿ ಮಾಡಲಾಗಿರುವ ಕಳಪೆ ರಸ್ತೆಯನ್ನು ನಾಳೆಯೇ ಜೆಸಿಬಿ ಬಳಸಿ ಸಂಪೂರ್ಣವಾಗಿ ತೆರವುಗೊಳಿಸಬೇಕು. ಆ ಜಾಗದಲ್ಲಿ ಹೊಸದಾಗಿ ಪ್ಲಾಸ್ಟಿಕ್ ಶೀಟ್ ಅಳವಡಿಸಿ, ಉತ್ತಮ ಗುಣಮಟ್ಟದ ಜಲ್ಲಿ ಹಾಗೂ ಸಿಮೆಂಟ್ ಬಳಸಿ ಕಾಂಕ್ರೀಟ್ ರಸ್ತೆಯನ್ನು ಮರುನಿರ್ಮಾಣ ಮಾಡಿಕೊಡಬೇಕು" ಎಂದು ಕರವೇ ಸ್ವಾಭಿಮಾನಿ ಸೇನೆ ಜಿಲ್ಲಾಧ್ಯಕ್ಷರಾದ ಫ್ರಾನ್ಸಿಸ್ ಡಿಸೋಜ ಮತ್ತು ಗ್ರಾಮಸ್ಥರು ಕಟ್ಟುನಿಟ್ಟಿನ ಪಟ್ಟು ಹಿಡಿದಿದ್ದಾರೆ ಸಾರ್ವಜನಿಕರ ಹಣವನ್ನು ಲೂಟಿ ಹೊಡೆಯಲು ಸಂಚು ರೂಪಿಸಿ, ರಾತ್ರಿ ಹೊತ್ತು ಕಳಪೆ ಕಾಮಗಾರಿ ನಡೆಸಿದ KRIDL ಅಧಿಕಾರಿಗಳು ಮತ್ತು ಸಂಬಂಧಪಟ್ಟ ಗುತ್ತಿಗೆದಾರರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲು ಗ್ರಾಮಸ್ಥರು ಹಾಗೂ ಕರವೇ ಸ್ವಾಭಿಮಾನಿ ಸೇನೆ ನಿರ್ಧರಿಸಿದೆ. ಈ ವ್ಯವಸ್ಥಿತ ಭ್ರಷ್ಟಾಚಾರದ ವಿರುದ್ಧ ಶೀಘ್ರದಲ್ಲೇ ಲೋಕಾಯುಕ್ತಕ್ಕೆ ಅಧಿಕೃತ ದೂರು ಸಲ್ಲಿಸಲಾಗುವುದು ಎಂದು ಕರವೇ ಸ್ವಾಭಿಮಾನಿ ಸೇನೆ ಜಿಲ್ಲಾಧ್ಯಕ್ಷರಾದ ಫ್ರಾನ್ಸಿಸ್ ಡಿಸೋಜ ಮತ್ತು ಗ್ರಾಮಸ್ಥರು ತಿಳಿಸಿದ್ದಾರೆ. ವರದಿ ಮಹೇಶ್ ಶರ್ಮಾ
Yadgir, Yadgir | Oct 1, 2026
I got over 20,000 reactions on one of my posts last week! Thanks everyone for your support! 🎉
Yadgir, Yadgir | Sep 30, 2026
ಗಣೇಶ ವಿಸರ್ಜನೆ: ಅಹಿತಕರ ಘಟನೆ ತಡೆಯಲು ಬಿಗಿ ಪೊಲೀಸ್ ಬಂದೋಬಸ್ತ್ ಮದ್ದೂರು: ಮದ್ದೂರು ನಗರದಲ್ಲಿ ಸೆಪ್ಟೆಂಬರ್ 28, 2026ರಂದು ಸನಾತನ ಬಾಯ್ಸ್ & ಸರ್ವಸಿದ್ಧಾಂತ ಯುವಕರ ಬಳಗದ ವತಿಯಿಂದ ಗಣೇಶ ವಿಸರ್ಜನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆ ಮುನ್ನೆಚ್ಚರಿಕಾ ಕ್ರಮವಾಗಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಂಡಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿ.ಜೆ., ಐಪಿಎಸ್ ಅವರ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ವಿವಿಧ ಪ್ರಮುಖ ಸ್ಥಳಗಳಲ್ಲಿ ನಿಯೋಜಿಸಲಾಗಿತ್ತು. ಗಣೇಶ ಮೆರವಣಿಗೆ ಸಾಗುವ ಮಾರ್ಗಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಸ್ಥಳಗಳು ಹಾಗೂ ವಿಸರ್ಜನಾ ಸ್ಥಳಗಳಲ್ಲಿ ಪೊಲೀಸ್ ಸಿಬ್ಬಂದಿ ಕಟ್ಟುನಿಟ್ಟಿನ ನಿಗಾ ವಹಿಸಿದ್ದರು. ಗಣೇಶ ವಿಸರ್ಜನಾ ಕಾರ್ಯಕ್ರಮವು ಶಾಂತಿಯುತವಾಗಿ ನಡೆಯುವಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಮೆರವಣಿಗೆಯ ಸಂದರ್ಭದಲ್ಲಿ ಸಾರ್ವಜನಿಕರ ಸುರಕ್ಷತೆ, ಸಂಚಾರ ವ್ಯವಸ್ಥೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಕಾರ್ಯನಿರ್ವಹಿಸಿದರು. ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿಯೇ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದರು. ಕಾರ್ಯಕ್ರಮವು ಶಾಂತಿಯುತವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಯಲು ಪೊಲೀಸ್ ಇಲಾಖೆಯ ಬಂದೋಬಸ್ತ್ ವ್ಯವಸ್ಥೆ ನೆರವಾಯಿತು.
Yadgir, Yadgir | Sep 30, 2026
ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ UNICEF ತಂಡದೊಂದಿಗೆ ಮಹತ್ವದ ಸಭೆ ಯಾದಗಿರಿ: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ರಾಹುಲ್ ತುಕಾರಾಮ ಪಾಂಡ್ವೆ, ಭಾ.ಆ.ಸೇ. ಅವರ ಅಧ್ಯಕ್ಷತೆಯಲ್ಲಿ UNICEF ಹೈದರಾಬಾದ್ ತಂಡದೊಂದಿಗೆ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಸ್ವಚ್ಛತೆ, ಕುಡಿಯುವ ನೀರು ಹಾಗೂ WASH (Water, Sanitation and Hygiene) ಸೇರಿದಂತೆ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ಶ್ರೀ ಕೆ. ಕುಮಲಯ್ಯ, UNICEF ತಂಡದ Dr. Prabhat Matpady, WASH & CCES Expert ಹಾಗೂ NL Narasimha Reddy, E&K Management Expert ಸೇರಿದಂತೆ DDPI, DHO, WCD, DIET ಪ್ರಾಂಶುಪಾಲರು ಹಾಗೂ SBM ತಂಡದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ Swachh Bharat Mission (SBM) ಮತ್ತು Jal Jeevan Mission (JJM) ಯೋಜನೆಗಳ ಅನುಷ್ಠಾನ, ಸ್ವಚ್ಛತೆ, ಕುಡಿಯುವ ನೀರಿನ ಲಭ್ಯತೆ ಹಾಗೂ ಸಂಬಂಧಿತ ಕಾರ್ಯಕ್ರಮಗಳ ಪ್ರಗತಿ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಯಿತು. ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ ಮತ್ತು ಸುರಕ್ಷಿತ ಕುಡಿಯುವ ನೀರಿನ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಇಲಾಖೆಗಳ ನಡುವೆ ಸಮನ್ವಯದಿಂದ ಕಾರ್ಯನಿರ್ವಹಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. #YadgirNews #Yadgir #UNICEF #WASH #UnicefTeamHyderabad #SBM #SBMG #JJM #JalJeevanMission #SwachhBharatMission #DistrictAdministrationYadgir #RuralDevelopment #PanchayatRajKarnataka
Yadgir, Yadgir | Sep 30, 2026
ಮುಖ್ಯಮಂತ್ರಿ ಪ್ರವಾಸ ಹಿನ್ನೆಲೆ ವಿಜಯವಾಡದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಕಿನೇನಿ ಬಸವಪುಣ್ಣಯ್ಯ ಕ್ರೀಡಾಂಗಣದಲ್ಲಿ ಭದ್ರತಾ ವ್ಯವಸ್ಥೆ ಪರಿಶೀಲಿಸಿದ ನಗರ ಪೊಲೀಸ್ ಆಯುಕ್ತ ಎಸ್.ವಿ. ರಾಜಶೇಖರ ಬಾಬು ವಿಜಯವಾಡ: ಇದೇ ತಿಂಗಳ 30ರಂದು ಗೌರವಾನ್ವಿತ ಮುಖ್ಯಮಂತ್ರಿ ಅವರು ಮನೆ ನಿವೇಶನ ಪಟ್ಟಿಗಳ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಹಿನ್ನೆಲೆಯಲ್ಲಿ ವಿಜಯವಾಡದ ಅಜಿತ್ ಸಿಂಗ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಾಕಿನೇನಿ ಬಸವಪುಣ್ಣಯ್ಯ ಕ್ರೀಡಾಂಗಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಪ್ರವಾಸದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರಾದ ಶ್ರೀ ಎಸ್.ವಿ. ರಾಜಶೇಖರ ಬಾಬು, ಐಪಿಎಸ್ ಅವರು ಇಂದು ಪೊಲೀಸ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಕ್ರೀಡಾಂಗಣ, ಸುತ್ತಮುತ್ತಲಿನ ಪ್ರದೇಶಗಳು, ಪ್ರವೇಶ ಮತ್ತು ನಿರ್ಗಮನ ಮಾರ್ಗಗಳು ಹಾಗೂ ವಾಹನಗಳ ಪಾರ್ಕಿಂಗ್ ಸ್ಥಳಗಳನ್ನು ಪರಿಶೀಲಿಸಿದರು. ಈ ವೇಳೆ ಬಂದೋಬಸ್ತ್ ವ್ಯವಸ್ಥೆಯ ಕುರಿತು ಸಂಬಂಧಿತ ಅಧಿಕಾರಿಗಳು ಹಾಗೂ ಕಾರ್ಯಕ್ರಮದ ಆಯೋಜಕರಿಗೆ ಹಲವು ಅಗತ್ಯ ಸೂಚನೆಗಳನ್ನು ನೀಡಿದರು. ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯರು ಹಾಗೂ ಸಾರ್ವಜನಿಕರ ಸುರಕ್ಷತೆ, ಸಂಚಾರ ನಿಯಂತ್ರಣ ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಚಿಸಲಾಯಿತು. ಈ ಕುರಿತು ಮಾತನಾಡಿದ ನಗರ ಪೊಲೀಸ್ ಆಯುಕ್ತ ಎಸ್.ವಿ. ರಾಜಶೇಖರ ಬಾಬು ಅವರು, ಮುಖ್ಯಮಂತ್ರಿ ಅವರ ಪ್ರವಾಸದ ಹಿನ್ನೆಲೆಯಲ್ಲಿ ಮಾಕಿನೇನಿ ಬಸವಪುಣ್ಣಯ್ಯ ಕ್ರೀಡಾಂಗಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಧುನಿಕ ತಂತ್ರಜ್ಞಾನ, ಅತ್ಯಾಧುನಿಕ ಸಿಸಿಟಿವಿ ಕ್ಯಾಮೆರಾಗಳು ಹಾಗೂ ಎಐ ಆಧಾರಿತ ನಿಗಾ ವ್ಯವಸ್ಥೆ ಬಳಸಿಕೊಂಡು ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಮುಖ್ಯಮಂತ್ರಿ ಅವರ ಕಾರ್ಯಕ್ರಮದ ಭದ್ರತೆಗಾಗಿ 3 ಎಸ್ಪಿಗಳು, 1 ಎಡಿಸಿಪಿ, 17 ಎಸಿಪಿಗಳು ಹಾಗೂ 37 ಇನ್ಸ್ಪೆಕ್ಟರ್ಗಳು ಸೇರಿದಂತೆ ಒಟ್ಟು 1,076 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಕಾರ್ಯಕ್ರಮದ ಸಂದರ್ಭದಲ್ಲಿ ಕ್ರೀಡಾಂಗಣದ ಒಳಭಾಗ ಹಾಗೂ ಹೊರಭಾಗದಲ್ಲಿ ಭದ್ರತಾ ವ್ಯವಸ್ಥೆ, ಪಾರ್ಕಿಂಗ್, ಸಂಚಾರ ನಿರ್ವಹಣೆ ಮತ್ತು ಸಾರ್ವಜನಿಕರ ಸುರಕ್ಷತೆಗೆ ವಿಶೇಷ ಗಮನ ನೀಡಲಾಗಿದೆ. ಈ ಸಂದರ್ಭದಲ್ಲಿ ಡಿಸಿಪಿ ಶ್ರೀ ಜಿ. ರಾಮಕೃಷ್ಣ, ಎಸಿಪಿಗಳು, ಇತರೆ ಇಲಾಖೆಗಳ ಅಧಿಕಾರಿಗಳು, ಪೊಲೀಸ್ ಇನ್ಸ್ಪೆಕ್ಟರ್ಗಳು ಹಾಗೂ ಕಾರ್ಯಕ್ರಮದ ಆಯೋಜಕರು ಉಪಸ್ಥಿತರಿದ್ದರು. #NTRPolice #VijayawadaPolice #NTRPoliceCommissionerate #Vijayawada #CMVisit #SecurityArrangements #PoliceBandobast #PublicSafety #Security #AISurveillance #CCTV #MakineneniBasavapunnaiahStadium #AjitSinghNagar #APPolice #AndhraPradeshPolice #SafeVijayawada
Yadgir, Yadgir | Sep 30, 2026
BREAKING NEWS || ಹಿಂದೂ ಮಹಾಗಣಪತಿ ಶೋಭಾಯಾತ್ರೆ ಹಿನ್ನೆಲೆ ಅಣಕು ಪ್ರದರ್ಶನ ಚಿತ್ರದುರ್ಗ: ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ಶೋಭಾಯಾತ್ರೆಯ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿಗಳಲ್ಲಿ ಕೈಗೊಳ್ಳಬೇಕಾದ ಕಾರ್ಯಾಚರಣೆ ಕುರಿತು ಅಣಕು ಪ್ರದರ್ಶನ (Mock Drill) ನಡೆಸಲಾಯಿತು. ಪೊಲೀಸ್ ಅಧೀಕ್ಷಕರಾದ ಕುಶಲ್ ಚೌಕ್ಸೆ, ಐಪಿಎಸ್ ಅವರ ನಿರ್ದೇಶನದಂತೆ, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಉಪಾಧೀಕ್ಷಕರ ನೇತೃತ್ವದಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ವತಿಯಿಂದ ಈ ಅಣಕು ಪ್ರದರ್ಶನ ಆಯೋಜಿಸಲಾಗಿತ್ತು. ತುರ್ತು ಸೇವಾ ಇಲಾಖೆಗಳು ಹಾಗೂ ಸ್ವಯಂಸೇವಾ ಸಂಸ್ಥೆಗಳ ಸಹಯೋಗದಲ್ಲಿ ಮದಕರಿ ಸರ್ಕಲ್, ಅಂಬೇಡ್ಕರ್ ಸರ್ಕಲ್ ಮತ್ತು ಗಾಂಧಿ ಸರ್ಕಲ್ಗಳಲ್ಲಿ ಅಣಕು ಪ್ರದರ್ಶನ ನಡೆಸಿ, ಅವಘಡ ಸಂಭವಿಸಿದ ಸಂದರ್ಭದಲ್ಲಿ ತುರ್ತು ಕಾರ್ಯಾಚರಣೆಯನ್ನು ಹೇಗೆ ಕೈಗೊಳ್ಳಬೇಕು ಎಂಬುದನ್ನು ಪ್ರಾಯೋಗಿಕವಾಗಿ ಪ್ರದರ್ಶಿಸಲಾಯಿತು. ಶೋಭಾಯಾತ್ರೆಯ ಸಂದರ್ಭದಲ್ಲಿ ಯಾವುದೇ ತುರ್ತು ಪರಿಸ್ಥಿತಿ ಎದುರಾದರೂ ಸಮನ್ವಯದಿಂದ ತ್ವರಿತವಾಗಿ ಕಾರ್ಯನಿರ್ವಹಿಸುವ ಉದ್ದೇಶದಿಂದ ಈ Mock Drill ನಡೆಸಲಾಗಿದೆ. #ನಮ್ಮ_ಚಿತ್ರದುರ್ಗ_ಜಿಲ್ಲಾ_ಪೊಲೀಸ್ #ChitradurgaPolice #KarnatakaStatePolice #MockDrill #HinduMahaganapathi #Chitradurga
Yadgir, Yadgir | Sep 29, 2026
ಹಸ್ಕಾಂ ಅಧಿಕಾರಿಗಳ ಮೇಲೆ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿಯಿಂದ ಹಲ್ಲೆ ಆರೋಪ ಚನ್ನರಾಜ್ ಹಟ್ಟಿಹೊಳಿ ವಿರುದ್ಧ ಲಿಖಿತ ದೂರು ನೀಡ್ತಿರುವ ಹೆಸ್ಕಾಂ ಸಿಬ್ಬಂದಿ ಎಇಇ ದೀಪಕ್ ಹಾಗೂ ಸೆಕ್ಷನ್ ಅಧಿಕಾರಿ ರಾಜು ಚೌಹ್ವಾನ್ ಅವರಿಂದ ಲಿಖಿತ ದೂರು ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡ್ತಿರುವ ಸಿಬ್ಬಂದಿ ವಿದ್ಯುತ್ ಬಿಲ್ ಪಾವತಿಸದಕ್ಕೆ ಚನ್ನರಾಜ್ ಆಪ್ತನ ಕ್ರಷರ್ನ ಸಂಪರ್ಕ ಕಟ್ ಮಾಡಿದ್ದ ಅಧಿಕಾರಿಗಳು ಈ ಹಿನ್ನೆಲೆಯಲ್ಲಿ ಇಬ್ಬರೂ ಅಧಿಕಾರಿಗಳನ್ನು ಮನೆಗೆ ಕರೆಯಿಸಿ ಹಲ್ಲೆ ಹಲ್ಲೆ ಹಿನ್ನೆಲೆಯಲ್ಲಿ ಚನ್ನರಾಜ್ ಹಟ್ಟಿಹೊಳಿ ವಿರುದ್ಧ ಲಿಖಿತ ದೂರು ಕೊಡ್ತಿರುವ ಸಿಬ್ಬಂದಿ
Yadgir, Yadgir | Sep 29, 2026
ರಿಪೋರ್ಟರ್ಸ್ ಗಿಲ್ಡ್ನ ಬೆಳ್ಳಿ ಮಹೋತ್ಸವದ ಅಂಗವಾಗಿ ರಿಪೋರ್ಟರ್ಸ್ ಗಿಲ್ಡ್ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಪತ್ರಕರ್ತರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಗೆ ಜಿಲ್ಲಾಧಿಕಾರಿಗಳಾದ ಪೂವಿತಾ, ಎಸ್ ರವರು ಬ್ಯಾಟ್ ಬೀಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಅಧಿಕಾರಿಗಳು ಮತ್ತು ಮಾಧ್ಯಮ ಪ್ರತಿನಿಧಿಗಳ ನಡುವೆ ಉತ್ತಮ ಸಂವಹನ ಹಾಗೂ ಸೌಹಾರ್ದಯುತ ವಾತಾವರಣ ನಿರ್ಮಾಣಕ್ಕೆ ಇಂತಹ ಕ್ರೀಡಾಕೂಟಗಳು ಸಹಕಾರಿಯಾಗುತ್ತವೆ. ಕ್ರೀಡಾ ಚಟುವಟಿಕೆಗಳು ದೈಹಿಕ ಕ್ಷಮತೆ ಹಾಗೂ ಮಾನಸಿಕ ಉಲ್ಲಾಸಕ್ಕೆ ಪೂರಕವಾಗಿದ್ದು, ವೃತ್ತಿಪರ ಒತ್ತಡ ನಿವಾರಣೆಯಲ್ಲಿಯೂ ಸಹಕಾರಿಯಾಗುತ್ತವೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ಆಯುಕ್ತರಾದ ಬಿ. ವೆಂಕಟಸಿಂಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ ಕಾಂದೂ, ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಾಪಾತ್ರ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆರ್. ಗುರುನಾಥ್, ರಿಪೋರ್ಟರ್ಸ್ ಗಿಲ್ಡ್ ಅಧ್ಯಕ್ಷ ವಿಜಯ ಜಾಗಟಗಲ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮಾಧ್ಯಮ ಪ್ರತಿನಿಧಿಗಳು ಉಪಸ್ಥಿತರಿದ್ದರು. Yadgir News @topfans
Yadgir, Yadgir | Sep 29, 2026