ಹಡಗಲಿ: ಹಡಗಲಿಗೆ ಬರ ಅಧ್ಯಯನ ತಂಡ ಭೇಟಿ: ಅಧಿಕಾರಿಗಳಿಂದ ಪೂರ್ವಭಾವಿ ಪರಿಶೀಲನೆ
ಅಕ್ಟೋಬರ್ 3ರಂದು ವಿಜಯನಗರ ಜಿಲ್ಲೆಯ ಹಡಗಲಿ ತಾಲೂಕಿಗೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ ನೀಡಲಿದೆ. ಈ ಹಿನ್ನೆಲೆಯಲ್ಲಿ ಇಟ್ಟಗಿ ಗ್ರಾಮದಲ್ಲಿ ನಡೆಯುತ್ತಿರುವ ಗೋಕಟ್ಟೆ ಅಭಿವೃದ್ಧಿ ಕಾಮಗಾರಿಯನ್ನು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಕೆ.ತಿಮ್ಮಪ್ಪ ನೇತೃತ್ವದ ಅಧಿಕಾರಿಗಳ ತಂಡ ಪರಿಶೀಲಿಸಿದೆ.