ಬೆಳಗಾವಿ: ಬೆಳಗಾವಿ ಪಾಲಿಕೆ ಎದುರು ಕರವೇ ಪ್ರತಿಭಟನೆ: ಕರ್ನಾಟಕದ ಅವಿಭಾಜ್ಯ ಅಂಗವೆಂದು ಘೋಷಿಸಲು ಆಗ್ರಹ
ಬೆಳಗಾವಿ ಮಹಾನಗರ ಪಾಲಿಕೆ ಎದುರು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ನಿರ್ಣಯ ಕೈಗೊಳ್ಳುವಂತೆ ಆಗ್ರಹಿಸಿ, ವಾಜೀದ್ ಹಿರೇಕೋಡಿ ನೇತೃತ್ವದಲ್ಲಿ ಈ ಹೋರಾಟ ನಡೆದಿದೆ. ಕಳೆದ ಆರು ತಿಂಗಳಿಂದ ಈ ಸಂಬಂಧ ಸಂಘಟನೆಗಳು ಒತ್ತಾಯಿಸುತ್ತಿವೆ.