ತಿಪಟೂರು: ತಿಪಟೂರಿನ 3 ಗ್ರಾಮಗಳಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ
ತಿಪಟೂರು ತಾಲೂಕಿನ ಮತ್ತಿಹಳ್ಳಿ, ಕರಿಕೆರೆ ಮತ್ತು ಸಿದ್ದಾಪುರ ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಚಿರತೆ ಹಾವಳಿಯಿಂದ ಗ್ರಾಮಸ್ಥರು ಕಂಗಾಲಾಗಿದ್ದು, ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.