ಬೆಳಗಾವಿ: ವಿಟಿಯು 26ನೇ ಘಟಿಕೋತ್ಸವ; 52 ಸಾವಿರ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 26ನೇ ಘಟಿಕೋತ್ಸವ ಕಾರ್ಯಕ್ರಮ ನಡೆಯಲಿದೆ. ರಾಜ್ಯಪಾಲರು ಮತ್ತು ಗಣ್ಯರ ಸಮ್ಮುಖದಲ್ಲಿ 52 ಸಾವಿರ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ, 38 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಹಾಗೂ ಮೂವರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತದೆ.