Public App Logo
Jansamasya
News
पुलिस
Maharashtra
Bjp
National
Police
Bihar
India
कांग्रेस
बीजेपी
Gujarat
मुख्यमंत्री
Congress
Modi
Delhi
Viral
मारपीट
Crime
Dm
Up
अमित_शाह
Bollywood
Breakingnews
Narendramodi
Madhya_pradesh
उत्तरप्रदेश
Pmmodi
Rahulgandhi
Uttarpradesh

ಶಿರಸಿ: ಮಾರಿಕಾಂಬೆ ಜಾತ್ರೆ ವೇಳೆ ಮೂಲಭೂತ ಸೌಕರ್ಯ ಕಲ್ಪಿಸುವುದಾಗಿ ನಗರದಲ್ಲಿ ಸಚಿವ ಮಂಕಾಳ ಭರವಸೆ; ಅನಂತಮೂರ್ತಿ ಸತ್ಯಾಗ್ರಹ ತಾತ್ಕಾಲಿಕ ಮುಂದೂಡಿಕೆ

Sirsi, Uttara Kannada | Jan 19, 2026
ಮುಂಬರುವ ರಾಜ್ಯ ಪ್ರಸಿದ್ಧ ಶಿರಸಿ ಜಾತ್ರೆಗೆ ಸಂಬಂಧಿಸಿ ಬರುವ ಭಕ್ತಾದಿಗಳಿಗೆ ವಸತಿ, ಊಟ, ನೀರು ಒಳಗೊಂಡ ಮೂಲಭೂತ ಸೌಕರ್ಯಗಳನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಆಗ್ರಹಿಸಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಹಾಗು ಸ್ಥಳೀಯ ಶಾಸಕ ಭೀಮಣ್ಣ ನಾಯ್ಕ ಅವರುಗಳಿಗೆ ಸೋಮವಾರ ಸಂಜೆ 4.30ರ ವೇಳೆ ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಮನವಿ ಸಲ್ಲಿಸಿದರು. ನಗರದ ಮಿನಿ ವಿಧಾನಸೌಧದಲ್ಲಿ ಜಿಲ್ಲಾಧಿಕಾರಿ, ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಜಾತ್ರಾ ಪೂರ್ವಭಾವಿ ಸಭೆಯಲ್ಲಿ ಅವರು ಪಾಲ್ಗೊಂಡು ಮನವಿ ನೀಡಿದರು. ಸೌಕರ್ಯಗಳನ್ನು ಸಚಿವರು ಕಲ್ಪಿಸುವ ಭರವಸೆ ನೀಡಿದ್ದಾರೆ