ಬಳ್ಳಾರಿ: ಅಕ್ಟೋಬರ್ 1 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ: ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನ
ಅಕ್ಟೋಬರ್ 01 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ನಡೆಯಲಿದೆ. ಜಿಲ್ಲೆಯ ಎಲ್ಲಾ ಹಿರಿಯ ನಾಗರಿಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಹೆಚ್. ಗೋವಿಂದಪ್ಪ ಅವರು ತಿಳಿಸಿದ್ದಾರೆ.