Public App Logo
Jansamasya
News
पुलिस
Bjp
National
Police
Bihar
India
कांग्रेस
बीजेपी
Gujarat
मुख्यमंत्री
Congress
Modi
Delhi
Viral
मारपीट
Crime
Dm
Up
अमित_शाह
Bollywood
Breakingnews
Narendramodi
Madhya_pradesh
उत्तरप्रदेश
Pmmodi
Rahulgandhi
यूपी
कानपुर

ಕಾರವಾರ: ಉತ್ತರ ಕನ್ನಡದ ಎಂಡೋಸಲ್ಫಾನ್ ಬಾಧಿತರಿಗೆ ಹೊಸ ಭರವಸೆ: ಆಶಾಕಿರಣ ಯೋಜನೆ ಜಾರಿ:ನಗರದಲ್ಲಿ ಡಾ. ವೆಂಕಟೇಶ ನಾಯ್ಕ

Karwar, Uttara Kannada | Jan 21, 2026
ಜಿಲ್ಲೆಯಲ್ಲಿ ದಶಕಗಳಿಂದ ಎಂಡೋಸಲ್ಫಾನ್ ಬಾಧೆಗೆ ಒಳಗಾಗಿಯೂ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿದ್ದ ನೂರಾರು ಕುಟುಂಬಗಳಿಗೆ ಇದೀಗ ಹೊಸ ಆಶಾಕಿರಣ ಮೂಡಿದೆ ಎಂದು ಸ್ಕೊಡ್ ವೆಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ವೆಂಕಟೇಶ ನಾಯ್ಕ ಹೇಳಿದ್ದಾರೆ. ನಗರದ ಜಿಲ್ಲಾ ಪತ್ರಿಕಾಭವನದಲ್ಲಿ ಬುಧವಾರ ಮಧ್ಯಾಹ್ನ 2ಕ್ಕೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ಎಸ್. ವೈದ್ಯರವರ ವಿಶೇಷ ಕಾಳಜಿಯಿಂದಾಗಿ, ಜಿಲ್ಲೆಯ ಆರು ತಾಲೂಕುಗಳಲ್ಲಿ ಮರು ಸಮೀಕ್ಷೆ ನಡೆಸಿ ಹೊಸದಾಗಿ 543 ಸಂತ್ರಸ್ತರನ್ನು ಗುರುತಿಸುವ ಮೂಲಕ ಅವರಿಗೆ ಮಾನವೀಯ ನೆರವು ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.