ಬೈಲಹೊಂಗಲ: ಬೈಲಹೊಂಗಲದ ಹೊಸೂರು ಗ್ರಾಮದಲ್ಲಿ 'ಪ್ರಜಾಸೇವಾ ಸಭೆ': ಸಾರ್ವಜನಿಕರ ಅಹವಾಲು ಸ್ವೀಕಾರ
ಬೈಲಹೊಂಗಲ ಮತಕ್ಷೇತ್ರದ ಹೊಸೂರು ಗ್ರಾಮದಲ್ಲಿ ಆಯೋಜಿಸಿದ್ದ ಪ್ರಜಾಸೇವಾ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಾಯಿತು. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವ ಉದ್ದೇಶದಿಂದ ಈ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ಸವದತ್ತಿ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.