ಬೆಳಗಾವಿ: ಪತ್ನಿಯ ಹತ್ಯೆಗೈದು ಪರಾರಿಯಾಗಿದ್ದ ಆರೋಪಿ ಬೈಲಹೊಂಗಲದಲ್ಲಿ ಅರೆಸ್ಟ್
ಬೈಲಹೊಂಗಲದಲ್ಲಿ ಶೀಲ ಶಂಕಿಸಿ ಪತ್ನಿಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದ ಆರೋಪಿ ರಾಜು ಮಾಡಮಗೇರಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ನಂತರ ಪರಾರಿಯಾಗಿದ್ದ ಆರೋಪಿಯನ್ನು ಬೆಳಗಾವಿಗೆ ತೆರಳುವ ಮಾರ್ಗದಲ್ಲಿ ಬೈಲಹೊಂಗಲ ಪೊಲೀಸರು ಬಂಧಿಸಿದ್ದಾರೆ.