ಹಗರಿಬೊಮ್ಮನಹಳ್ಳಿ: ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹ: ಶಾಸಕರ ಮನೆ ಮುಂದೆ ಪ್ರತಿಭಟನೆ
ಕಾರ್ಮಿಕರ ಬೇಡಿಕೆಗಳ ಕುರಿತು ಚರ್ಚಿಸಲು ಸಭೆ ಕರೆಯುವಂತೆ ಒತ್ತಾಯಿಸಿ, ಸಿಐಟಿಯು ತಾಲೂಕು ಸಮಿತಿ ನೇತೃತ್ವದಲ್ಲಿ ಶಾಸಕ ನೇಮಿರಾಜ್ ನಾಯ್ಕ್ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಲಾಯಿತು. ಶಾಸಕರ ಅನುಪಸ್ಥಿತಿಯಲ್ಲಿ ಅವರ ಪತ್ನಿ ಹಾಗೂ ಆಪ್ತ ಸಹಾಯಕರಿಗೆ ಮನವಿ ಸಲ್ಲಿಸಲಾಯಿತು.