ವಿರಾಜಪೇಟೆ: ಏಷ್ಯನ್ ಗೇಮ್ಸ್ ವಿಜೇತ ಎಂ.ಆರ್. ಪೂವಮ್ಮ ಅವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ ಎ.ಎಸ್. ಪೊನ್ನಣ್ಣ
ಏಷ್ಯನ್ ಗೇಮ್ಸ್ ಅಥ್ಲೆಟಿಕ್ಸ್ನಲ್ಲಿ ಚಿನ್ನ ಮತ್ತು ಬೆಳ್ಳಿ ಪದಕ ಗೆದ್ದ ಕೊಡಗಿನ ಕುವರಿ ಎಂ.ಆರ್. ಪೂವಮ್ಮ ಅವರಿಗೆ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ವಿಡಿಯೋ ಕಾಲ್ ಮೂಲಕ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಪೂವಮ್ಮ ಅವರ ಸಾಧನೆಯನ್ನು ಶ್ಲಾಘಿಸಿ, ಮುಂದಿನ ಕ್ರೀಡಾ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸಿದ್ದಾರೆ.