ಉಡುಪಿ: ಹನುಮಾನ್ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ಬಸ್ ಕಳ್ಳತನ; ಮುದುರಂಗಡಿಯಲ್ಲಿ ಪತ್ತೆ!
Udupi, Udupi | Sep 30, 2026 ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳುವಾಗಿದೆ. ಸುಮಾರು 40 ಲಕ್ಷ ರೂ. ಮೌಲ್ಯದ ಬಸ್ ಮುದುರಂಗಡಿ ಸಮೀಪದ ಮುದ್ದಾಡಿ ಹಾಡಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ಬಸ್ ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಸಂಬಂಧ ತನಿಖೆ ಮುಂದುವರಿದಿದೆ.