ಮಡಿಕೇರಿ: ಚೇಲಾವರದಲ್ಲಿ 25 ಲಕ್ಷ ರೂಪಾಯಿ ವೆಚ್ಚದ ನೂತನ ಸೇತುವೆ ಲೋಕಾರ್ಪಣೆ
ಮಡಿಕೇರಿ ತಾಲೂಕಿನ ಚೇಲಾವರದಲ್ಲಿ ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು 25 ಲಕ್ಷ ರೂ. ಅನುದಾನದಲ್ಲಿ ನಿರ್ಮಿಸಲಾದ ನೂತನ ಸೇತುವೆಯನ್ನು ಉದ್ಘಾಟಿಸಿದರು. ಈ ಸೇತುವೆ ಶಾಲಾ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ, ವಿಶೇಷವಾಗಿ ಮಳೆಗಾಲದಲ್ಲಿ ಸಂಚಾರಕ್ಕೆ ಅನುಕೂಲವಾಗಲಿದೆ.