ಹೊಸಪೇಟೆ: ರೈಲು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ 8 ಎಮ್ಮೆಗಳು
ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಬಳಿ ರೈಲು ಹಳಿ ದಾಟುತ್ತಿದ್ದ ಎಮ್ಮೆಗಳ ಹಿಂಡಿಗೆ ಡೆಮು ರೈಲು ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ 8 ಎಮ್ಮೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಹೈನುಗಾರಿಕೆಯನ್ನು ನಂಬಿ ಬದುಕುತ್ತಿದ್ದ ಮಾಲೀಕ ಕಾಳಪ್ಪ ಕುಟುಂಬ ತೀವ್ರ ಆಘಾತಕ್ಕೊಳಗಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.